ದಾವಣಗೆರೆ, ಜು. 9 – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ನಾಡಿದ್ದು ದಿನಾಂಕ 11 ರ ಗುರುವಾರ ನಗರಕ್ಕೆ ಆಗಮಿಸಲಿದ್ದಾರೆ.
ಅಂದು 10.30 ಕ್ಕೆ ಬಿಐಇಟಿ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿರುವ ವಿಶ್ವ ಜನಸಂಖ್ಯಾ ದಿನ-2024 ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡುವರು.
ನಂತರ ಮಧ್ಯಾಹ್ನ 12.30 ಕ್ಕೆ ಆರೋಗ್ಯ ಇಲಾಖಾ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ಮತ್ತು ಪರಿಶೀಲನೆ ಮಾಡುವ ಸಚಿವರು, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸುವರು.