ದಾವಣಗೆರೆ, ಜು. 9- ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದ ವತಿಯಿಂದ ಅವರ ಜನ್ಮ ದಿನಾಚರಣೆ ಸಮಾರಂಭವನ್ನು ಇದೇ ದಿನಾಂಕ 13 ರಂದು ಬೆಳಿಗ್ಗೆ 10.30 ಕ್ಕೆ ನಗರದ ಶ್ರೀ ಅಭಿನವ ರೇಣುಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಮುಖಂಡರೂ, ದೂಡಾ ಮಾಜಿ ಅಧ್ಯಕ್ಷರೂ ಆದ ಯಶವಂತರಾವ್ ಜಾಧವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಳಗದ ವತಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಜಿ.ಎಂ. ಸಿದ್ದೇಶ್ವರರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಅಂಧ ಮಕ್ಕಳು ಕೇಕ್ ಕತ್ತರಿಸುವ ಮೂಲಕ ಶುಭ ಕೋರಲಿದ್ದಾರೆ. ಮಕ್ಕಳಿಗೆ ಭೋಜನದ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು. ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಮುಖಂಡರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, ಜಿ.ಎಂ. ಸಿದ್ದೇಶ್ವರ ಅವರು ಮಧ್ಯ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದು, ಅವರ ಅಧಿಕಾರವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಬಿ.ಎಸ್. ಜಗದೀಶ್, ಬಿ.ಎಂ. ಸತೀಶ್ ಕೊಳೇನಹಳ್ಳಿ, ಟಿಂಕರ್ ಮಂಜಣ್ಣ, ದೇವರಾಜ್ ನೆಲಹೊನ್ನೆ, ರಾಕೇಶ ಭಜರಂಗಿ, ರಾಜು ನೀಲಗುಂದ ಉಪಸ್ಥಿತರಿದ್ದರು.