ನಗರದಲ್ಲಿ ಇಂದು ಪಠ್ಯಪೂರಕ ಚಟುವಟಿಕೆಗಳ ಸಮಾರೋಪ

ಕಾಲೇಜು ಶಿಕ್ಷಣ ಮಂಡಳಿ ಮತ್ತು ನ್ಯಾಕ್ ‘ಬಿ++’ ಶ್ರೇಣಿ ರೂಸಾ ಅನುದಾನಿತ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11ಕ್ಕೆ 2023-24ನೇ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ  ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ, ವಿಶ್ರಾಂತ ಪ್ರಾಧ್ಯಾಪಕ ಡಾ. ಆರ್. ತಿಪ್ಪಾರೆಡ್ಡಿ ಪಾಲ್ಗೊಳ್ಳಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಮಂಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪಾಲಿಕೆ ಸದಸ್ಯೆ ವೀಣಾ ನಂಜಪ್ಪ, ಕಾಲೇಜಿನ  ಅಧೀಕ್ಷಕ ಟಿ. ಶೇಷಪ್ಪ ಉಪಸ್ಥಿತರಿರುವರು.

error: Content is protected !!