ದಾವಣಗೆರೆ, ಜು.9- ಇದೇ ದಿನಾಂಕ 28ರಂದು ಶ್ರೀ ಮಾರ್ಕಂಡೇಶ್ವರ ಪದ್ಮಸಾಲಿ (ನೇಕಾರ) ಯುವಕ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪದ್ಮಸಾಲಿ (ನೇಕಾರ) ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಶ್ರೀನಿವಾಸ್ ಪಿ.ಜಿ. ತಿಳಿಸಿದರು.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಸ್‌ಕೆಪಿ ರಸ್ತೆ ಮಾರ್ಕಂಡೇಶ್ವರ ಸಮುದಾಯ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಅಂದು ಬೆಳಿಗ್ಗೆ 10ರಿಂದ 12 ಗಂಟೆವರೆಗೆ 5ರಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಮಧ್ಯಾಹ್ನ 2ರಿಂದ 3 ಗಂಟೆವರೆಗೆ ಪ್ರೇರಣಾ ತರಗತಿ ನಡೆಯಲಿದೆ. ಸಂಜೆ 4 ಗಂಟೆಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.
ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾಯಿಸಲು ಸಂಘದ ಅಧ್ಯಕ್ಷ ಶ್ರೀನಿವಾಸ್ ಪಿ.ಜಿ. (9886614722), ಪ್ರಧಾನ ಕಾರ್ಯದರ್ಶಿ ಸೇಪೂರ್ ಆನಂದ್ (9900956880) ಅವರನ್ನು ಸಂಪರ್ಕಿಸಬಹುದು. ಹೆಸರು ನೋಂದಾಯಿಸಲು ಇದೇ ದಿನಾಂಕ 15 ಕೊನೆಯ ದಿನವಾಗಿದೆ ಎಂದರು.
ಸಂಘಟನೆಯ ಪ್ರಮುಖರಾದ ಶ್ರೀನಿವಾಸ್ ಡಿ.ಎಸ್. ಮಾರ್ಕಂಡೇಯ ನರಾಲ್, ಪಿ. ರುದ್ರೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.