ದಾವಣಗೆರೆ, ಜ.5- ಸಿದ್ಧರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ತಾಲ್ಲೂಕಿನ ಬೋರಗೊಂಡನಹಳ್ಳಿಯ ಹೆಚ್.ಗಿರಿಯಾಪುರ ಗ್ರಾಮದಲ್ಲಿ ಹಮಾಲರ ವಸತಿ ಗೃಹ ಉದ್ಘಾಟಿಸಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮುಂದೆ ನಾಯಿ ಮರಿ ಎಂಬ ಅವರ ಹೇಳಿಕೆ ಸರಿಯಲ್ಲ. ಅವರು ಗೌರವಯುತವಾಗಿ ಮಾತನಾಡ ಬೇಕು ಎಂದು ಹೇಳಿದರು.
ಶೇ.40ರಷ್ಟು ಕಮೀಷನ್ ಪಡೆದ ಆರೋಪ ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷರ ಪರಿಸ್ಥಿತಿ ಏನಾಗಿದೆ? ಈಗ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಛೇಡಿಸಿದರು.
ಶಾಮನೂರು ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ಕಾಡು ಮೃಗಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಯಾರು ಮಾಡಿದ್ದರೂ ಶಿಕ್ಷೆಯಾಗುತ್ತದೆ.
ಈ ಪ್ರಕರಣದಲ್ಲಿ ಮಾಲೀಕರೇ ಹೊಣೆ ಎಂದು ಭೈರತಿ ಹೇಳಿದರು.