23 ರಂದು ಗ್ರಾ.ಪಂ ನೌಕರರ ಮುಷ್ಕರ

ದಾವಣಗೆರೆ, ಜು. 16- ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ಸೌಲಭ್ಯ ಸೇರಿದಂತೆ 19 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇದೇ ದಿನಾಂಕ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ (ಸಿಐಟಿಯು)ದ ರಾಜ್ಯ ಖಜಾಂಚಿ ಆರ್.ಎಸ್. ಬಸವರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಲ್‌ ಕಲೆಕ್ಟರ್, ನೀರಗಂಟಿ, ಕಂಪ್ಯೂಟರ್ ಆಪರೇಟರ್, ಜವಾನ, ಗುಮಾಸ್ತರಿಗೆ ಕನಿಷ್ಠ 31 ಸಾವಿರ ರೂ. ವೇತನ ನಿಗದಿ ಮಾಡಬೇಕೆಂದು ಒತ್ತಾಯಿಸಿ 2022 ರಿಂದ ಹೋರಾಟ ನಡೆಸುತ್ತಿದ್ದರೂ ಇದುವರೆಗೂ ಬೇಡಿಕೆ ಈಡೇರಿಲ್ಲ. ಕಳೆದ ಜನವರಿಯಲ್ಲಿ ಹೋರಾಟ ನಡೆಸಿದ ಸಂದರ್ಭ ದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರೇ ಭರ ವಸೆ ನೀಡಿದ್ದರೂ ಜಾರಿಗೆ ಬಂದಿಲ್ಲ. ಹಾಗಾಗಿ ಬೇಡಿಕೆ ಈಡೇರಿಸುವ ತನಕ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೆ ವರ್ಷಕ್ಕೆ 15 ದಿನಗಳ ವೇತನ ಆಧರಿಸಿ ಪಿಂಚಣಿ ನೀಡಬೇಕು. ಆದರೆ ಪಿಂಚಣಿ ನೀಡಲಾಗುತ್ತಿಲ್ಲ. ಕನಿಷ್ಠ ಆರು ಸಾವಿರ ರೂ.ಪಿಂಚಣಿ ನೀಡಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಕೆ.ಹೆಚ್. ಆನಂದರಾಜ್, ಶ್ರೀನಿವಾಸಚಾರಿ, ಚಂದ್ರಪ್ಪ, ಬಸವರಾಜ್ ಬೇತೂರು ಮತ್ತಿತರರಿದ್ದರು.

error: Content is protected !!