ಲೋಕಸಭೆಯ ಮಾಜಿ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರ ಜನ್ಮ ದಿನ ಸಮಾರಂಭವನ್ನು ಶ್ರೀ ಅಭಿನವ ರೇಣುಕ ಮಂದಿರದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಮಾಜಿ ಮುಖ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ. ರವಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಮುರುಗೇಶ್ ನಿರಾಣಿ, ಎಂ.ಎಲ್.ಸಿ.ಗಳಾದ ಎನ್. ರವಿಕುಮಾರ್, ನವೀನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್, ಬಿಜೆಪಿ ಮುಖಂಡರು ಮತ್ತಿತರರು ಭಾಗವಹಿಸಲಿದ್ದಾರೆ.
December 27, 2024