ನಟಿ, ನಿರೂಪಕಿ ಅಪರ್ಣಾ ನಿಧನ

ನಟಿ, ನಿರೂಪಕಿ ಅಪರ್ಣಾ ನಿಧನ

ಬೆಂಗಳೂರು, ಜು. 11 – ಕನ್ನಡ ಚಿತ್ರ ರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ನಿಧನರಾಗಿದ್ದಾರೆ. ದೀರ್ಘಕಾಲದ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.

ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು.

ಬೆಂಗಳೂರಿನ ಮೆಟ್ರೋದಲ್ಲಿ ಪ್ರಯಾಣಿಸುವವರಿಗೆ ಇವರ ಧ್ವನಿ ಚಿರಪರಿಚಿತವಾಗಿದ್ದು, ಬೆಂಗಳೂರಿನ ದೂರದರ್ಶನದಲ್ಲಿ ನಿರೂಪಕಿಯಾಗಿ, ಆಕಾಶವಾಣಿಯಲ್ಲಿ ನಿರೂಪಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಅಪರ್ಣಾ, ಕಿರುತೆರೆಯಲ್ಲಿ §ಮೂಡಲಮನೆ¬, §ಮುಕ್ತ¬ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 

2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು.

`ಅಚ್ಛ ಕನ್ನಡದ ನಿರೂಪಕಿ’ ಎಂದೇ ಹೆಸರಾಗಿದ್ದ ಅಪರ್ಣಾ ಅವರು, ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿದ್ದರು.

ಅಪರ್ಣಾ ಅವರ ನಿಧನ ಸುದ್ದಿ ಕೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ದಿನೇಶ್ ಗುಂಡೂರಾವ್, ನಟ – ನಿರ್ದೇಶಕ ರಿಷಬ್ ಶೆಟ್ಟಿ ಮತ್ತಿತರರ ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!