ದಾವಣಗೆರೆ, ಜು. 16- ಜಗಳೂರು ತಾಲ್ಲೂಕು ಮಾದಿಗ ಸಮಾಜದ ವತಿಯಿಂದ ಇದೇ ದಿನಾಂಕ 28 ರಂದು ಮಧ್ಯಾಹ್ನ 1 ಗಂಟೆಗೆ ಜಗಳೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಸಮಾಜದ ಜಗಳೂರು ತಾಲ್ಲೂಕು ಅಧ್ಯಕ್ಷ ಎಂ. ಬಸವರಾಜ್ ಪಲ್ಲಾಗಟ್ಟೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 75 ರಷ್ಟು ಅಂಕ ಗಳಿಸಿದ ಜಗಳೂರು ತಾಲ್ಲೂಕು ಮಾದಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು. ರಾಜ್ಯಾಧ್ಯಕ್ಷ ಮಂಜುನಾಥ್ ಭದ್ರಾವತಿ, ಜಿಲ್ಲಾಧ್ಯಕ್ಷ ಹೆಚ್.ಸಿ. ಮಲ್ಲಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆಂದರು. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಇದೇ ದಿನಾಂಕ 25 ರೊಳಗಾಗಿ 9731675844 ಗೆ ಕರೆ ಮಾಡಲು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಗಳೂರು ಮಾದಿಗ ಸಂಘದ ಸುಧಾ ಮತ್ತು ಶಶಿಕಲಾ ಉಪಸ್ಥಿತರಿದ್ದರು.