ದಾವಣಗೆರೆ, ಜು. 16- ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂದು ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ 20.45 ಲಕ್ಷ ರೂ.ಗಳನ್ನು ವಂಚಿಸಿರುವ ಘಟನೆ ನಡೆದಿದೆ.
ಹರಿಹರ ಕೇಶವನಗರದ ಸತೀಶ್ ಅವರಿಗೆ ಅಪರಿಚಿತರು ವಾಟ್ಸಾಪ್ ಮೂಲಕ ಪರಿಚಯಿಸಿಕೊಂಡು ಷೇರು ಮಾರುಕಟ್ಟೆಗೆ ಸಂಬಂಧಿಸಿದ ಗ್ರೂಪ್ನಲ್ಲಿ ಸೇರಿಸಿಕೊಂಡು, ಷೇರು ಖರೀದಿಸಿ ಮಾರಾಟ ಮಾಡಿ ಲಾಭ ಮಾಡಿಕೊಳ್ಳಬಹುದು ಎಂದು ಹೇಳಿ ಹಂತ ಹಂತವಾಗಿ ಒಟ್ಟು 20,45,443 ರೂ.ಗಳನ್ನು ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಈ ಕುರಿತು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.