ಮತದಾರರಿಗೆ ಆಮಿಷ; ಉಪಸಭಾಪತಿ ರುದ್ರಪ್ಪ ಲಮಾಣಿ ವಿರುದ್ದ ಎಫ್‌ಐಆರ್

ಮತದಾರರಿಗೆ ಆಮಿಷ; ಉಪಸಭಾಪತಿ ರುದ್ರಪ್ಪ ಲಮಾಣಿ ವಿರುದ್ದ ಎಫ್‌ಐಆರ್

ರಾಣೇಬೆನ್ನೂರು, ಜು.16-  2023ರ ವಿಧಾನಸಭೆ ಚುನಾವಣೆಗೆ  ನಾಮಪತ್ರ ಸಲ್ಲಿಕೆ ಸಮಯದಲ್ಲಿ ನಡೆಸಿದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಸಾವಿರಕ್ಕೂ ಅಧಿಕ ಟಿ-ಶರ್ಟ್ ನೀಡಿ, ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಆರೋಪದಡಿ ಶಾಸಕ, ಇಂದಿನ ಉಪಸಭಾಪತಿ ರುದ್ರಪ್ಪ ಲಮಾಣಿ ವಿರುದ್ದ ಹಾವೇರಿ ಶಹರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮತದಾರರಿಗೆ, ಕಾರ್ಯಕರ್ತರಿಗೆ ಟಿ-ಶರ್ಟ್ ನೀಡಿ ತಮ್ಮ ಪರವಾಗಿ ಮತ ಚಲಾಯಿಸುವ ಆಮಿಷ ವೊಡ್ಡಿದ್ದರು ಎಂದು ಚುನಾವಣಾ ವೇಳೆ ವಿಚಕ್ಷಣಾ ದಳದ ಅಧಿಕಾರಿಯಾಗಿದ್ದ ವಸೀಂ ಮಿರ್ಚಿ ಅವರು ನೀಡಿದ್ದ ದೂರಿನನ್ವಯ ಎಫ್ ಐ ಆರ್ ದಾಖಲಿಸಲಾಗಿದ್ದು, ತನಿಖೆ ನಡೆದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!