ದಾವಣಗೆರೆ, ಜು.17- ರಾಜ್ಯ ಸರ್ಕಾರ ನೀಡುತ್ತಿದ್ದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪ್ರೋತ್ಸಾಹ ಧನಕ್ಕೆ ಕತ್ತರಿ ಹಾಕುವ ಮೂಲಕ ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಬೆನ್ನಿಗೆ ಚೂರಿ ಹಾಕಿದೆ ಎಂದು ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಟೀಕಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳಿಗೆ ಬರಬೇಕಾದ ಪ್ರೋತ್ಸಾಹ ಧನ ಸಹ ಬರುತ್ತಿಲ್ಲ. ಇಂತಹ ಸಂದರ್ಭದಲ್ಲಿ ಮೊದಲ ಪ್ರಯತ್ನದಲ್ಲಿ ಎಸ್ಎಸ್ಎಲ್‌ಸಿ ಪ್ರಥಮ ದರ್ಜೆಯಲ್ಲಿ ಪಾಸ್ ಆದ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು 6 ಲಕ್ಷ ಆದಾಯ ಮಿತಿಯ ಷರತ್ತು ಹೇರಿರುವುದನ್ನು ಎಐಡಿಎಸ್‌ಓ ಖಂಡಿಸುತ್ತದೆ ಎಂದಿದ್ದಾರೆ. ಸರ್ಕಾರ ಒಂದೆಡೆ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ನಿಧಿಯನ್ನು ಬಳಸಿ, ಇನ್ನೊಂದೆಡೆ ವಿದ್ಯಾರ್ಥಿಗಳ ವೇತನವನ್ನು ಕಿತ್ತು ಕೊಳ್ಳುತ್ತಿದೆ. ಇದು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಕುರಿತು ರಾಜ್ಯ ಸರ್ಕಾರಕ್ಕಿರುವ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಈ ಕೂಡಲೇ ಸರ್ಕಾರ ನೀಡುತ್ತಿದ್ದ ಅಲ್ಪ ಮೊತ್ತದ ಪ್ರೋತ್ಸಾಹ ಧನವನ್ನು ಮುಂದು ವರೆಸಬೇಕೆಂದು ಆಗ್ರಹಿಸಿದ್ದಾರೆ ಎಂದು ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ತಿಳಿಸಿದ್ದಾರೆ.