ಮಹಿಳೆಯರಿಗೆ ಫ್ಯಾಷನ್ ಡಿಸೈನಿಂಗ್ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜು.18-  ಧರ್ಮಸ್ಥಳ ಮಂಜುನಾ ಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಡ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಷನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ ಉಚಿತ ತರಬೇತಿ ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ದಿನಾಂಕ 23 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಕ್ಕೆ ಸಂಪರ್ಕಿಸಬಹುದಾಗಿದೆ.  

error: Content is protected !!