ಸ್ಪೂರ್ತಿ ಸಾಂಸ್ಕೃತಿಕ ಸೇವಾ ಸಂಘದ ವತಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ರೋಟರಿ ಬಾಲಭವನದಲ್ಲಿ ಬಸಾಪುರದ ಶ್ರೀ ರೇವಣಸಿದ್ಧೇಶ್ವರ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಕಲಾವಿದರುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಯರಗುಂಟೆ ಶ್ರೀ ಗುರು ಕರಿಬಸವೇಶ್ವರ ಗದ್ದುಗೆ ಮಠದ ಶ್ರೀ ಪರಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಹೆಚ್.ಕೆ. ಲಿಂಗರಾಜ್ ಕಾರ್ಯಕ್ರಮ ಉದ್ಘಾಟಿಸುವರು. ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸವರಾಜ ಐರಣಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಾಹಿತಿ ಹೆಚ್.ಕೆ. ಸತ್ಯಭಾಮ, ಬಸಾಪುರ ಶ್ರೀ ರೇವಣಸಿದ್ದೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಕೆ.ಜಿ. ಸೌಭಾಗ್ಯ, ಬಸವ ಬಳಗದ ದೇವಿಗೆರೆ ಗಿರೀಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ. ಶಿವಶಂಕರ್, ಬಿಜೆಪಿ ಮುಖಂಡ ಹೆಚ್.ಎನ್. ಶಿವಕುಮಾರ್ ಆಗಮಿಸಲಿದ್ದಾರೆ.