ದಾವಣಗೆರೆ, ಜು.19- 2024-25ನೇ ಸಾಲಿನಲ್ಲಿ ಭಾಗವಹಿಸುತ್ತಿರುವ ರೈತರು ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ , ಬೆಳೆ ಪದ್ದತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ ನೀರಿನ ಸಾಮರ್ಥ ಬಳಕೆ ಇನ್ನಿತರೆ ಯಾವುದಾದರು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಆಸಕ್ತ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳ ಬಗ್ಗೆ ತಾಲ್ಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.