ಭಾರತೀಯ ರೈತ ಒಕ್ಕೂಟದಿಂದ ಇಂದು ರೈತರ ಸಭೆ

 ಭದ್ರಾ ಅಣೆಕಟ್ಟಿನಿಂದ ಅಚ್ಚುಕಟ್ಟು ಪ್ರದೇಶಗಳಿಗೆ ಮಳೆಗಾಲದ ಬೆಳೆಗೆ ನೀರು ಹರಿಸುವ ಬಗ್ಗೆ ಸಭೆ ಇಂದು ಮಧ್ಯಾಹ್ನ 12.30ಕ್ಕೆ  ದಾವಣಗೆರೆಯ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರ ಅಧ್ಯಕ್ಷತೆ ಯಲ್ಲಿ ನಡೆಯುವ ಈ ಸಭೆಗೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಭಾಗವಹಿಸುವಂತೆ ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಶಾಮನೂರು ಹೆಚ್.ಆರ್. ಲಿಂಗರಾಜ್ ಅವರು ಕೋರಿದ್ದಾರೆ.

error: Content is protected !!