ವಿದ್ಯಾಸಾಗರ ಶಾಲೆ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಸಂಕಲ್ಪ ದಿನಾಚರಣೆ ಹಾಗು ಕೈ ತುತ್ತು ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶ್ರೀ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಶ್ರೀ ತ್ಯಾಗೀಶ್ವರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಿಕ್ಷಣ ತಜ್ಞ ಜಗನ್ನಾಥ ನಾಡಿಗೇರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶ್ರೀ ಗುರುದೇವಾ ವಿದ್ಯಾ ಸಮಿತಿ ಅಧ್ಯಕ್ಷ ಆರ್. ಭರತ್ ಸಿಂಗ್ ಅಧ್ಯಕ್ಷತೆ ವಹಿಸುವರು. ಆಡಳಿತಾಧಿಕಾರಿ ಸತ್ಯವತಿ ಸಿಂಗ್ ಮತ್ತಿತರರು ಭಾಗವಹಿಸಲಿದ್ದಾರೆ.