ಮೊಬೈಲ್ ರಿಪೇರಿ : ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜು. 24 – ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆ. 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 93801 62042, 97409 82585 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ್‌ ತಿಳಿಸಿದ್ದಾರೆ.

error: Content is protected !!