ಯಕ್ಷರಂಗ, ಕರಾವಳಿ ಮಿತ್ರ ಮಂಡಳಿ, ದೃಶ್ಯ ಕಲಾ ಮಹಾವಿದ್ಯಾಲಯ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಂಜೆ 6 ಗಂಟೆಗೆ ದೃಶ್ಯ ಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಯಕ್ಷರಂಗ ಯಕ್ಷಗಾನ ಸಂಸ್ಥೆಯ ಅಧ್ಯಕ್ಷ ಮಲ್ಯಾಡಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜೈರಾಜ್ ಚಿಕ್ಕಪಾಟೀಲ, ಅಂಚೆ ಇಲಾಖೆ ಅಧೀಕ್ಷಕ ಚಂದ್ರಶೇಖರ ಹೊಳ್ಳ, ಯಕ್ಷರಂಗ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚ ಸಂಸ್ಥೆ ಅಧ್ಯಕ್ಷ ಕೆ.ಹೆಚ್.ಮಂಜುನಾಥ್, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಗಣೇಶ್ ಶೆಣೈ, ಹೇಮಾ ಶಾಂತಪ್ಪ ಪೂಜಾರಿ ಭಾಗವಹಿಸಲಿದ್ದಾರೆ.