ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೆ.ಹೆಚ್. ಪಟೇಲ್ ಫೌಂಡೇಷನ್, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಶಿರಮಗೊಂಡನ ಹಳ್ಳಿಯ ಅನ್‌ಮೋಲ್ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಏರ್ಪಡಿಸಲಾಗಿದೆ. ಹಿರಿಯ ಸಾಹಿತಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಅವರು ಕನ್ನಡ ಸಾಹಿತ್ಯ ಲೋಕ ದೃಷ್ಟಿ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ.
ನಿವೃತ್ತ ಕೆ.ಎ.ಎಸ್. ಅಧಿಕಾರಿ ರುದ್ರಪ್ಪ ಹನಗವಾಡಿ, ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನ ಶಿವನಕರೆೆ ಬಸವಲಿಂಗಪ್ಪ ಉಪಸ್ಥಿತರಿರುವರು.