ಎಆರ್‌ಜಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಗ್ಗೆ 11ಕ್ಕೆ ಸಾಂಸ್ಕೃತಿಕ ಕ್ರೀಡಾ, ಎನ್ಎಸ್‌ಎಸ್, ಎನ್‌ಸಿಸಿ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ಕರ್ನಾಟಕ ರಾಜ್ಯ ವಿವಿಯ ಕಾಲೇಜು ಅಧ್ಯಾಪಕರ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ. ಸಿ.ಎಚ್. ಮುರುಗೇಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕಲಾವಿದ ಎಸ್.ಜಿ. ಮಲ್ಲೇಶ್ ಕುಮಾರ್, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎ.ಜಿ. ಮಂಜುನಾಥ್, ಜಿ.ಬಿ.ಬೋರಯ್ಯ, ಜೆ.ಕೆ. ಮಲ್ಲಿಕಾರ್ಜುನ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.