ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೆ.ಹೆಚ್. ಪಟೇಲ್ ಫೌಂಡೇ ಷನ್, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಸಂಯುಕ್ತಾ ಶ್ರಯದಲ್ಲಿ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಚಾಮರಾಜನಗರ ದೀನಬಂಧು ಟ್ರಸ್ಟ್ನ ಜಿ.ಎಸ್. ಜಯದೇವ ಕಾರ್ಯಕ್ರಮ ಉದ್ಘಾಟಿಸಿ, ಶಿಕ್ಷಣ ಮತ್ತು ಮಕ್ಕಳ ಮನೋ ವಿಕಾಸ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ. ವಿಜಯ ಪುರ ಶರಣತತ್ವ ಚಿಂತಕ ಡಾ. ಜೆ.ಎಸ್. ಪಾಟೀಲ ಬಸವವಾದ ಮತ್ತು ಸಂವಿಧಾನದ ಆಶಯಗಳು ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಿದ್ಧಗಂಗಾ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಜಸ್ಟಿನ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
January 9, 2025