ನಾಳಿನ ಛಲವಾದಿ ಸಮಾಜದ ಕಾರ್ಯಕ್ರಮಕ್ಕೆ ಸಚಿವ ಡಾ. ಮಹಾದೇವಪ್ಪ

ದಾವಣಗೆರೆ, ಜು. 26- ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 75 ರಷ್ಟು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 80 ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 28 ರಂದು ಬೆಳಿಗ್ಗೆ 11 ಕ್ಕೆ ಬಿಐಇಟಿ ಕಾಲೇಜಿನ ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ್‌ ಸಾಂಸ್ಕೃತಿಕ ಭವನದಲ್ಲಿ ನಡೆಸಲಾಗುವುದು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಎನ್. ರುದ್ರಮುನಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೈಸೂರಿನ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹಾ ದೇವಪ್ಪ ಬಸವೇಶ್ವರರ ಭಾವಚಿತ್ರಕ್ಕೆ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಂಬೇಡ್ಕರ್ ಭಾವಚಿತ್ರಕ್ಕೆ, ನೆಹರು.ಚ. ಓಲೇಕಾರ್ ಓನಕೆ ಓಬವ್ವ ಭಾವಚಿತ್ರಕ್ಕೆ, ಬಿ. ಬಸವಲಿಂಗಪ್ಪ ಭಾವಚಿತ್ರಕ್ಕೆ ಛಲವಾದಿ ನಾರಾಯಣ ಸ್ವಾಮಿ ಪುಷ್ಪಾರ್ಚನೆ ಮಾಡಲಿದ್ದಾರೆಂದು ಹೇಳಿದರು.

ಎಸ್ಸೆಸ್ಸೆಲ್ಸಿ 38 ಹಾಗೂ ಪಿಯುಸಿ 28 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. 

ಪತ್ರಕಾಗೋಷ್ಠಿಯಲ್ಲಿ ಮಹಾಸಭಾದ ಪದಾಧಿಕಾರಿ ಗಳಾದ ಎಸ್. ಶೇಖರಪ್ಪ, ಎಸ್.ಎನ್.ಬಸವರಾಜ್, ಜಯಣ್ಣ, ನಾಗಭೂಷಣ್, ರೇವಣಸಿದ್ಧಪ್ಪ, ಕೊಟ್ರಬಸಪ್ಪ, ಫಕ್ಕೀರಪ್ಪ, ಈಶ್ವರಪ್ಪ ಮತ್ತಿತರರಿದ್ದರು.

error: Content is protected !!