ಇಂದು ಸಂಜೆ 4 ಗಂಟೆಗೆ ಪತ್ರಿಕಾ ಭವನದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳ ಲಾಗಿದೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಪಿ ಹರೀಶ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ.ಎಂ ಮಂಜುನಾಥ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಬಡದಾಳ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂ ಘದ ಅಧ್ಯಕ್ಷೆ ಡಿ.ಜಿ ಶಾಂಭವಿ ಮತ್ತು ಕಾರ್ಯದರ್ಶಿ ಹೆಚ್.ಸಿ ಕೀರ್ತಿಕುಮಾರ್ ತಿಳಿಸಿದ್ದಾರೆ.