ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರ್ಕಾರಿ ಪ್ರೌಢಶಾಲೆ ವತಿಯಿಂದ ರಾಮಗೊಂಡನಹಳ್ಳಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ರಾಮಗೊಂಡನಹಳ್ಳಿಯ ಹೆಬ್ಬಾಳ್ ದಯಾನಂದ್ ಅವರಿಂದ ಮಕ್ಕಳಿಗೆ ಉಚಿತ ಟ್ರ್ಯಾಕ್ ಸೂಟ್ ವಿತರಣೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ. ಮುಖ್ಯೋಪಾಧ್ಯಾಯ ಟಿ.ಎಸ್. ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ದಾವಣಗೆರೆ ರೋಟರಿ ಕ್ಲಬ್ ಅಧ್ಯಕ್ಷ ಎಸ್.ಎನ್. ಮಳವಳ್ಳಿ, ಹೆಚ್. ಆಂಜನೇಯ ಮೂರ್ತಿ, ಎಂ.ಎನ್.ಬಿಲ್ಲಳ್ಳಿ, ಹೆಬ್ಬಾಳ್ ದಯಾನಂದ್, ಆರ್.ಎಸ್. ಓಂಕಾರಪ್ಪ, ಇನ್ನರ್ ವ್ಹೀಲ್ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿರುವರು.
January 7, 2025