ದಾವಣಗೆರೆ, ಜು.28- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್ಸೆಟ್ ಸಂಸ್ಥೆಯಿಂದ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 1ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
18 ರಿಂದ 45 ವರ್ಷದೊಳಗಿನ ಅರ್ಹ ಆಸಕ್ತರು ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಡಿಎಸ್ಎಲ್ಆರ್ ಕ್ಯಾಮೆರಾ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮಾಹಿತಿಗಾಗಿ 97409 82585, 9113880324 ಸಂಪರ್ಕಿಸಿ.