ದಾವಣಗೆರೆ, ಜು.29- ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ ಆಗ್ರಾ ಮತ್ತು ಕೊಲ್ಕೊತ್ತಾದ ಸೆಂಟ್ರಲ್ ಫುಟ್‌ವೇರ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ 60 ದಿನಗಳ ವಸತಿ ಸಹಿತ ಕೌಶಲ್ಯ ಅಭಿವೃದ್ದಿ ತರಬೇತಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಾಖಲೆಗಳೊಂದಿಗೆ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ, ನಂ.32 ಲಿಡಕರ್ ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು-560052 ಈ ವಿಳಾಸಕ್ಕೆ ಜುಲೈ 31 ರೊಳಗೆ ಅಂಚೆ ಮೂಲಕ ಸಲ್ಲಿಸಬೇಕೆಂದು ಜಿಲ್ಲಾ ಸಂಯೋಜಕರಾದ ಗಂಗಾಧರ್ ತಿಳಿಸಿದ್ದಾರೆ.
March 14, 2025