ಕೃಷಿ ಪಂಡಿತ್, ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ : ಜಿಲ್ಲೆಯ ರೈತರಿಂದ ಅರ್ಜಿ

ದಾವಣಗೆರೆ, ಆ.1- ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ರೈತರಿಂದ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  

ಅರ್ಜಿಗಳನ್ನು ಸಂಬಂಧ ಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಆಗಸ್ಟ್ 5ರ ಒಳಗಾಗಿ ಸಲ್ಲಿಸಬೇಕು.  ಮಾಹಿತಿಗಾಗಿ ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ.

error: Content is protected !!