ದಾವಣಗೆರೆ, ಆ. 4- ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ದಾವಣಗೆರೆ ಶಾಖೆಯ ವತಿಯಿಂದ ನಾಳೆ ದಿನಾಂಕ 5 ರ ಸೋಮವಾರ ನಗರದ ವೆಂಕಾಭೋವಿ ಕಾಲೋನಿಯಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ದೇವರ 62 ನೇ ರಥೋತ್ಸವ ಹಾಗೂ ಶ್ರೀ ಸಿದ್ಧರಾಮೇಶ್ವರ ಮಹಾಸ್ವಾಮೀಜಿಯವರ 22 ನೇ ಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಂಸ್ಥಾನದ ಧರ್ಮದರ್ಶಿ ಹೆಚ್. ಜಯಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಡಿನ ವಿವಿಧ ಮಠಾಧೀಶರು, ಜಿಲ್ಲೆಯ ಎಲ್ಲಾ ಶಾಸಕರು, ಸಮಾಜ ಬಾಂಧವರು ಆಗಮಿಸಲಿದ್ದಾರೆ ಎಂದರು.
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹರಿಹರ ವೀರಶೈವ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮತ್ಯುಂಜಯ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಉಪ್ಪಾರ ಜಗದ್ಗುರು ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಯಾದವ ಮಹಾಸಂಸ್ಥಾನದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಅಂಬಿಗರ ಚೌಡಯ್ಯ ಗುರುಪೀಠದ ಶ್ರೀ ಶಾಂತಭೀಷ್ಮ ಅಂಬಿಗರ ಚೌಡಯ್ಯ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಶ್ರೀ ಅನ್ನದಾನಿ ಭಾರತೀಯ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ, ರೆಡ್ಡಿ ಗುರುಪೀಠದ ಶ್ರೀ ವೇಮಾನಂದ ಸ್ವಾಮೀಜಿ, ಮೇದಾರ ಗುರುಪೀಠದ ಶ್ರೀ ಇಮ್ಮಡಿ ಮೇದಾರ ಕೇತೇಶ್ವರ ಸ್ವಾಮೀಜಿ, ಕೊರಟಿಕೆರೆಯ ಶ್ರೀ ಮಹಾಲಿಂಗ ಸ್ವಾಮೀಜಿ, ಚಿಕ್ಕಮಗಳೂರಿನ ಶ್ರೀ ಮರುಳಸಿದ್ಧ ಸ್ವಾಮೀಜಿ, ಹಾವೇರಿಯ ಶ್ರೀ ಶಾಂತಲಿಂಗ ಸ್ವಾಮೀಜಿ, ಯರಗಟ್ಟಿಯ ಶ್ರೀ ಜಯದೇವ ಸ್ವಾಮೀಜಿ, ಹೊನಕಲ್ಲಿನ ಶ್ರೀ ಬಸವ ರಮಾನಂದ ಸ್ವಾಮೀಜಿ , ಶಿಕಾರಿಪುರದ ಶ್ರೀ ಚನ್ನಬಸವ ಸ್ವಾಮೀಜಿ, ಮೈಸೂರಿನ ಶ್ರೀ ಬಸವ ಲಿಂಗಮೂರ್ತಿ ಸ್ವಾಮೀಜಿ, ಗುರು ಮಠಕಲ್ಲಿನ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಹೆಚ್. ಅಂಜಿನಪ್ಪ, ಬಸವರಾಜ್, ಶ್ರೀನಿವಾಸ್, ಮಂಜಪ್ಪ, ವೈ. ಬಸವರಾಜ್ ಉಪಸ್ಥಿತರಿದ್ದರು.