ದಾವಣಗೆರೆ, ಆ. 4- ನಗರದ ಮಹಾತ್ಮ ಗಾಂಧಿ ಸರ್ಕಲ್ ಹತ್ತಿರದ ಅಶೋಕ ರಸ್ತೆಗೆ ಎಂಟ್ರಿ ಕೊಡುವ ರಸ್ತೆಯಲ್ಲಿ ಒಂದು ಅಡಿ ಅಗಲದಷ್ಟು ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿವರೆಗೆ ಗುಂಡಿ ಬಿದ್ದಿರುವುದನ್ನು ಕೂಡಲೇ ಮಹಾನಗರ ಪಾಲಿಕೆ ಅಧಿಕಾರಿಗಳು ಸರಿಪಡಿಸದಿದ್ದರೆ ಇದೇ ದಿನಾಂಕ 7 ರಂದು ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ವತಿಯಿಂದ ಗಾಂಧಿ ಸರ್ಕಲ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ತಿಳಿಸಿದ್ದಾರೆ.
ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಇಲ್ಲಿ ಬಿದ್ದಿರುವ ಗುಂಡಿಯನ್ನು ಕಂಡು ಕಾಣದಂತೆ ವರ್ತನೆ ಮಾಡುತ್ತಿರುವ ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಲಕ್ಷೆ ವಹಿಸಿದ್ದಾರೆ, ದಿನನಿತ್ಯ ಅಶೋಕ ರಸ್ತೆ ಮೂಲಕ ಸಾವಿರಾರು ವಾಹನಗಳು ಓಡಾಡುತ್ತಾ ಗುಂಡಿಯಲ್ಲಿ ಸಣ್ಣಪುಟ್ಟ ವಾಹನಗಳು ದಾಟಲಾಗದೆ ಅಲ್ಲೇ ತಕ್ಷಣ ನಿಂತು ಬಿಡುತ್ತವೆ.
ಇದರಿಂದ ಎಲ್ಲಾ ರೀತಿಯ ವಾಹನಗಳ ಓಡಾಟಕ್ಕೆ ಬಹಳ ತೊಂದರೆಯಾಗಿದೆ. ಇದರಿಂದ ಜನರ ಸಂಚಾರಕ್ಕೆ ಮತ್ತು ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ.
ಈಗಾಗಲೇ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದ್ದು ಬಿದ್ದಿರುವ ರಸ್ತೆ ಗುಂಡಿಯನ್ನು ಕೂಡಲೇ ಸರಿಪಡಿಸದೇ ಹೋದರೆ ಸ್ಥಳದಲ್ಲೇ ರಸ್ತೆ ತಡೆದು ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.