ದಾವಣಗೆರೆ, ಆ.4- ಪ್ರಸಕ್ತ ಸಾಲಿನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ (ಪ್ರವರ್ಗ-3ಬಿ) ಸಮುದಾಯದ ಜನರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ, ಬಸವ ಬೆಳಗು, ವಿದೇಶ ವಿದ್ಯಾ ವಿಕಾಸ, ಜಲ ಯೋಜನೆ, ಕಾಯಕ ಕಿರಣ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ ಯೋಜನೆ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ ಯೋಜನೆಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಇದೇ ದಿನಾಂಕ 31ರ ಒಳಗಾಗಿ ಸೇವಾಸಿಂಧುವಿನಲ್ಲಿ sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://kvldc.karnataka.gov.in ಅಥವಾ 08192-230934 ಗೆ ಸಂಪರ್ಕಿಸಲು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.