ಕರ್ನಾಟಕ ಮರಾಠ ಸಮುದಾಯಗಳಿಗೆ ವಿವಿಧ ಯೋಜನೆಯ ಸಾಲ ಸೌಲಭ್ಯಕ್ಕೆ ಅರ್ಜಿ

ದಾವಣಗೆರೆ, ಆ.4- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯಗಳ ವಿವರ : ಶ್ರೀ ತಹಜಿರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹು ಮಹಾರಾಜ್‌ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

ಆಸಕ್ತರು ಇದೇ ದಿನಾಂಕ 31 ರೊಳಗೆ ಸೇವಾಸಿಂಧು ಪೋರ್ಟಲ್‌ನಲ್ಲಿ sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

 ಮಾಹಿತಿಗಾಗಿ ನಿಗಮದ ವೆಬ್‍ಸೈಟ್ kmcdc.karnataka.gov.in ಸಂಪರ್ಕಿಸಿ ಅಥವಾ 08192-230934 ಗೆ ಸಂಪರ್ಕಿಸಬಹುದು ಎಂದು ಅಭಿವೃದ್ಧಿ ಕರ್ನಾಟಕ ಮರಾಠ ಸಮುದಾಯಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

error: Content is protected !!