ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಎನ್.ಎಸ್.ಎಸ್. ಘಟಕ, ಗ್ರಾಮ ಸ್ವರಾಜ್ ಅಭಿಯಾನ, ಭಾರತ್ ಸೇವಾದಳ ಇವರ ಸಂಯುಕ್ತಾಶ್ರಯದಲ್ಲಿ ಇಂದು ರಾಮನಗರದಲ್ಲಿನ ಗಾಂಧಿ ಭವನದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ಶಿಬಿರ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕ್ವಿಟ್ ಇಂಡಿಯಾ ಚಳುವಳಿ ಒಂದು ನೆನಪು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸುವರು. ಪಾಲಿಕೆ ಮೇಯರ್ ವಿನಾಯಕ್ ಜಿ.ಹೆಚ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ಜಿಲ್ಲಾ ಸರ್ಜನ್ ಡಾ. ನಾಗೇಂದ್ರಪ್ಪ, ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಮಂಜುನಾಥ ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಿವೃತ್ತ ಪ್ರಾಂಶುಪಾಲ ದಾದಾಪೀರ್ ನವಿಲೇಹಾಳ್ ಕ್ವಿಟ್ ಇಂಡಿಯಾ ಚಳುವಳಿ ಕುರಿತು ಉಪನ್ಯಾಸ ನೀಡುವರು.