ವಿದ್ಯಾರ್ಥಿಗಳಿಗೆ ಪ್ರಬಂಧ, ಚರ್ಚಾ ಸ್ಪರ್ಧೆ

ದಾವಣಗೆರೆ, ಆ. 12 – ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ,ಸಹಕಾರ ಇಲಾಖೆೆ, ಶಾಲಾ ಶಿಕ್ಷಣ – ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಚರ್ಚಾ ಸ್ಪರ್ಧೆಯನ್ನು ಇದೇ ದಿನಾಂಕ 20 ರಂದು ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

 ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆಗಳು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಚರ್ಚಾ ಸ್ಪರ್ಧೆ ವಿಷಯ ಸಹಕಾರ ವಲಯದ ಪ್ರಾಥಮಿಕ ಸಂಘಗಳ ಬಲವರ್ಧನೆಯಿಂದ ಮಾತ್ರವೇ ಸಹಕಾರ ಚಳವಳಿ ಸಧೃಢಗೊಳ್ಳಬಲ್ಲದು. ಪ್ರಬಂಧ ಸ್ಪರ್ಧೆ : ಮಹಿಳಾ ಸಬಲೀಕರಣ ಮತ್ತು ಸಹಕಾರ ಸಂಸ್ಥೆಗಳ ಕುರಿತು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ ತಿಳಿಸಿದ್ದಾರೆ.

error: Content is protected !!