ಹೊನ್ನಾಳಿಯಲ್ಲಿ ಇಂದು ಪ್ರತಿಭಟನೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಕ್ಕೆ ಮೀಸಲಿಟ್ಟ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯ ಕೋಟ್ಯಾಂತರ ಹಣವನ್ನು ಜನಾಂಗದ ಪ್ರಗತಿಗೆ ಬಳಸದಿರುವ ರಾಜಕೀಯ ಪಕ್ಷಗಳ ಕ್ರಮ ಖಂಡಿಸಿ ಬಿಎಸ್‌ಪಿ ಇಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಬಿಎಸ್ಪಿ ತಾಲೂಕು ಅಧ್ಯಕ್ಷ ಆರ್. ಕುಬೇರಪ್ಪ ತಿಳಿಸಿದ್ದಾರೆ. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲ್ಲೂಕು ಕಚೇರಿಯವರೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಜನಾಂಗದ ಪ್ರಗತಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುವ ಕ್ರಮ ಖಂಡಿಸಿ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

error: Content is protected !!