ದಾವಣಗೆರ, ಆ. 13 – ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಇದೇ ದಿನಾಂಕ 31 ರೊಳಗಾಗಿ ವೆಬ್ಸೈಟ್ https://kmdconline.karnataka.gov.in ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತವನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
January 15, 2025