ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಮತ್ತು ರಾಜ್ಯಪಾಲರ ಪ್ರಜಾಪ್ರಭುತ್ವ- ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನೇತೃತ್ವ ಮತ್ತು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ನಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆ ಆರಂಭಗೊಳ್ಳಲಿದೆ. ಜಯದೇವ ವೃತ್ತ ನಂತರ ಮಹಾತ್ಮಗಾಂಧಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸ
ಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕ ಕೆ.ಎಸ್. ಬಸವಂತಪ್ಪ ಪಾಲ್ಗೊಳ್ಳುವರು.