ಹರಿಹರ, ಆ. 20 – ಹರಿಹರ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶದ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಗಳು ನಡೆಯಲಿವೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ ಮತ್ತು ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳಿಗೆ ವಿವಿಧ ಕೋರ್ಸ್‌ಗಳಿಗೆ ಅಲ್ಪಾವಧಿ ತರಬೇತಿಗಳನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಇದೇ ದಿನಾಂಕ 23 ರಂದು ಕೊನೆ ದಿನವಾಗಿದೆ. ವಿವರಗಳಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ 22ಸಿ ಮತ್ತು ಡಿ ಕೆಐಎಡಿಬಿ ಇಂಡಸ್ಟ್ರೀಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ. ಡಿಪೋ ಹತ್ತಿರ ಹರಿಹರ ಅಥವಾ ದೂ.ಸಂ. 90353 72971, 96110 25932, 88844 88202, 91643 69670ಗೆ ಸಂಪರ್ಕಿಸಬಹುದು.