ದಾವಣಗೆರೆ, ಆ. 20 – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಹಾಗೂ 10,000 ನಗದು ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರ ಬೇಕು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಸೆಪ್ಟೆಂಬರ್ 18 ರ ಒಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಚೇರಿ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ, ಎಂ.ಸಿ.ಸಿ. `ಬಿ’ ಬ್ಲಾಕ್ ಕುವೆಂಪು ನಗರ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ 08192-264056 ಸಂಖ್ಯೆಗೆ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್ ತಿಳಿಸಿದ್ದಾರೆ.