ದಾವಣಗೆರೆ, ಆ.20- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಿಗೆ ಸಾಮಾನ್ಯ ಪದವಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4 ಕೊನೆ ದಿನವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರವನ್ನು https://bcwd.karnataka.gov.in ಇಲ್ಲಿ ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮೂಲಕ ಅಥವಾ ಇಲಾಖೆಯ ಜಿಲ್ಲೆ ಹಾಗೂ ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು. ವಿವರಕ್ಕೆ ಸಂಪರ್ಕಿಸಿ : 8050770004, 8050770005.
January 9, 2025