ಮಲೇಬೆನ್ನೂರು ಪುರಸಭೆ : ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ 30ಕ್ಕೆ ಚುನಾವಣೆ

ಮಲೇಬೆನ್ನೂರು, ಆ.21- ಇಲ್ಲಿನ ಪುರಸಭೆಯ ಅಧ್ಯಕ್ಷ ಸ್ಥಾನವನ್ನು ಬದಲಿಸುವಂತೆ ಪುರಸಭೆ ಸದಸ್ಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸಂದರ್ಭದಲ್ಲಿಯೇ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗದಿ ಮಾಡಿ, ತಹಶೀಲ್ದಾರ್ ಗುರುಬಸವರಾಜ್ ನೊಟೀಸ್ ಜಾರಿ ಮಾಡಿದ್ದಾರೆ. ಇದೇ ದಿನಾಂಕ 30 ರಂದು ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಾಗಿರುವುದರಿಂದ ಇಲ್ಲಿ ಆ ಮೀಸಲಾತಿಯವರು ಯಾರೂ ಆಯ್ಕೆಯಾಗಿಲ್ಲ. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವವರು ಯಾರೂ ಇಲ್ಲ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿದ್ದು, 11 ಮಹಿಳೆಯರು ಇದ್ದಾರೆ.

ದಿನಾಂಕ 30 ರೊಳಗಾಗಿ ಅಧ್ಯಕ್ಷ ಸ್ಥಾನಕ್ಕೆ ಕೋರ್ಟ್ ತಡೆಯಾಜ್ಞೆ ಬರಬಹುದು ಅಥವಾ ಅಧ್ಯಕ್ಷ ಸ್ಥಾನದ ಮೀಸಲಾತಿ ಬದಲಾಗುವ ಸಾಧ್ಯತೆ ಇದೆ ಎಂದು ಪುರಸಭೆ ಸದಸ್ಯರೊಬ್ಬರು `ಜನತಾವಾಣಿ’ಗೆ ತಿಳಿಸಿದರು.

error: Content is protected !!