ಹರಿಹರ : ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮಹಿಳಾ ಘಟಕದಿಂದ ಇಂದು ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಲಾಗು ವುದು. ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೀ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಹಾಗೂ ಪಂಚಮಸಾಲಿ ಸಮಾಜದ ಹಿರಿಯರು, ಮುಖಂಡರು ಪಾಲ್ಗೊಳ್ಳಲಿದ್ದಾರೆಂದು ಶ್ರೀ ಪೀಠದ ಆಡಳಿತಾಧಿಕಾರಿ ಡಾ.ರಾಜಕುಮಾರ್ ತಿಳಿಸಿದ್ದಾರೆ.
January 9, 2025