ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ,ಆ.22- ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಸಂಘಟಿಸುವ ಕ್ರೀಡಾ ಕ್ಷೇತ್ರದಲ್ಲಿ 2023 ರಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 

 ಪ್ರತಿಭಾನ್ವಿತ ಕ್ರೀಡಾಪಟುಗಳು ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಇಲ್ಲಿಗೆ ಸಲ್ಲಿಸಲು ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿಬಾಯಿ ತಿಳಿಸಿದ್ದಾರೆ. 

error: Content is protected !!