ದಾವಣಗೆರೆ, ಜ.10- ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಜಗಳೂರು ತಾಲ್ಲೂಕು ಅಧ್ಯಕ್ಷನ ಹತ್ಯೆ ಘಟನೆಗೆ ಕಾರಣರಾದ ಗೌರಿಪುರ ಪಿಡಿಒ ನಾಗರಾಜ್ ಮತ್ತು ಇತರರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ಶಂಕರ್ನಾಗ್ ಅಸೋಸಿಯೇಷನ್ನಿಂದ ನಗರದ ಜಯದೇವ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಅನ್ಯಾಯದ ವಿರುದ್ಧ ಹೋರಾಡುವವರ ಧ್ವನಿ ಅಡಗಿಸುವ ಹುನ್ನಾರ ನಡೆಯುತ್ತಿದೆ.ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್.ಜಿ. ಸೋಮಶೇಖರ್ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಕರಿಯಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕೆ.ಎಂ. ಚನ್ನಬಸಪ್ಪ, ಪದಾಧಿಕಾರಿಗಳಾದ ಅರುಣ್ ಕುಮಾರ್, ಜಮೀರ್ ಬಾಷಾ, ಅಶೋಕ್, ಅಜ್ಜಯ್ಯ, ಪ್ರಸನ್ನ, ಅಣ್ಣಪ್ಪ, ನಾಗರಾಜ್, ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.
January 20, 2025