ದಾವಣಗೆರೆ, ಆ.26 – ನಾಳೆ ದಿನಾಂಕ 27 ರಂದು ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಗೆಜೆಟೆಡ್ ಪ್ರೊಬೇಷನರ್ ವೃಂದದ ಹುದ್ದೆಗಳ ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.
ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿರುತ್ತಾರೆ.