ಸೆ. 14ರಂದು ರಾಷ್ಟ್ರೀಯ ಲೋಕ ಅದಾಲತ್

ದಾವಣಗೆರೆ,  ಆ.28 – ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು  ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ್ ತಿಳಿಸಿದ್ದಾರೆ.

ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ  ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್‌ ಅದಾಲತ್ತನ್ನು ಆಯೋಜಿಸಲಿವೆ. ಸಾರ್ವಜನಿಕರು  ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳ ಬೇಕು. ಈ ಅದಾಲತ್‌ನಲ್ಲಿ  ನ್ಯಾಯಾಲಯದಲ್ಲಿ ಚಾಲ್ತಿಯ ಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾ ಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು   ಪರಿಹರಿಸಿಕೊಳ್ಳಬಹುದು.  ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನ ಹೆೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರ ಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳ ಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದೂ.08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂ.  08192-296885, ಹೆೊನ್ನಾಳಿ ದೂ. 08188-251732, ಚನ್ನಗಿರಿ ದೂ.  08189-229195 ಮತ್ತು ಜಗಳೂರು ದೂ. 08196-227600 ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.

error: Content is protected !!