ಇಲ್ಲಿನ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು, ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಗುರುಬಸವರಾಜ್ ಕಾರ್ಯನಿರ್ವಹಿಸಲಿದ್ದಾರೆ.
ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇಲ್ಲಿ ಎಸ್ಟಿ ಮಹಿಳಾ ಸದಸ್ಯರು ಯಾರೂ ಇಲ್ಲದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿರುವುದರಿಂದ ಒಟ್ಟು 11 ಮಹಿಳೆಯರು ಇದ್ದಾರೆ. ಪುರಸಭೆಯಲ್ಲಿ ಕಾಂಗ್ರೆಸ್ ಬಹುಮತ ಹೊಂದಿರುವುದರಿಂದ ಸಹಜವಾಗಿಯೇ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ. ಏತನ್ಮಧ್ಯೆ, ಕೆಲವು ಪುರಸಭೆ ಸದಸ್ಯರು ಅಧ್ಯಕ್ಷ ಸ್ಥಾನದ ಮೀಸಲಾತಿ ಬದಲಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.