ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಶ್ರೀಮತಿ ಅಪರ್ಣಾ ಎಂ. ಕೊಳ್ಳ ಅವರು ಇಂದು ಮತ್ತು ನಾಳೆ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಶಾಲೆ, ವಸತಿ ನಿಲಯ, ಅಂಗನವಾಡಿ ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
ನಾಳೆ ಭಾನುವಾರ ಬೆಳಿಗ್ಗೆ 9 ಗಂಟೆಗೆ ವಿವಿಧ ಇಲಾಖೆಗಳ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.