ಗೌರಿ – ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸೌಹಾರ್ದ ಸಭೆಯನ್ನು ಇಂದು ಸಂಜೆ 4 ಗಂಟೆಗೆ ಪೊಲೀಸ್ ಠಾಣೆ ಆವರಣದಲ್ಲಿ ಹಮ್ಮಿಕೊಂಡಿದ್ದು, ಈ ಸಭೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಗ್ರಾಮಾಂತರ ಡಿವೈಎಸ್ಪಿ ಬಿ. ಎಸ್.ಬಸವರಾಜ್, ತಹಸಿಲ್ದಾರ್ ಗುರು ಬಸವರಾಜ್, ನಗರಸಭೆ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ, ಬೆಸ್ಕಾಂ ಇಲಾಖೆಯ ಎಇಇ, ಅಗ್ನಿಶಾಮಕ ದಳದ ಸಂಜೀವ್ ಕುಮಾರ್ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು ಎಂದು ಹರಿಹರ ನಗರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಎಸ್.ದೇವಾನಂದ್ ತಿಳಿಸಿದ್ದಾರೆ.
February 24, 2025