ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ, ಸೆ.1-  ರಾಜ್ಯದಲ್ಲಿ  ಪ್ಲಾಸ್ಟರ್ ಆಫ್ ಪ್ಯಾರಿಸ್  ಗಣೇಶ ವಿಗ್ರಹಗಳ ಮಾರಾಟ, ಉತ್ಪಾದನೆ ಹಾಗೂ ವಿಸರ್ಜನೆ ನಿಷೇಧಿಸಲಾಗಿದ್ದು,  ಸಾರ್ವಜನಿಕರು ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸಿ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ. 

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ, ಮಣ್ಣಿನ ಅಥವಾ ಇತರೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು.

ಗಣೇಶ ಮೂರ್ತಿ ಪ್ರತಿಷ್ಠಾಪನಾ ಸಮಿತಿಯವರು ಉತ್ಸವಕ್ಕೆ ಸಂಬಂಧಿಸಿದ  ಧ್ವನಿವರ್ಧಕ ಹಾಗೂ ಇತರೆ ಅನುಮತಿ ಪಡೆದುಕೊಳ್ಳಬೇಕು. ಗಣೇಶ ಪೆಂಡಾಲ್‌ಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳಾದ ಬಲೂನ್, ಪ್ಲಾಸ್ಟಿಕ್ ಸ್ಟಿಕ್‍ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‍ಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್‍ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರೀನ್ (ಥರ್ಮೋಕೋಲ್) ಬಳಸದಂತೆ  ಅವರು ತಿಳಿಸಿದ್ದಾರೆ.    

error: Content is protected !!